ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಆಫರ್ ಬಗ್ಗೆ ಹೊಸ ಬಾಂಬ್ ಸಿಡಿಸಿದರು. ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು…
Author: Fast News 24
ಕರೂರ್ ಕಾಲ್ತುಳಿತ ದುರಂತ: ಘಟನೆ ಬಗ್ಗೆ ವಿಧಾನಸಭೆಗೆ ವಿವರಣೆ ನೀಡಿದ ಸಿಎಂ ಎಂ.ಕೆ. ಸ್ಟಾಲಿನ್
ಚೆನ್ನೈ: ಕರೂರ್ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟ ವಿಚಾರ ಸಂಬಂಧ ತಮಿಳುನಾಡು ಸರ್ಕಾರ ತೆಗೆದುಕೊಂಡ ಮತ್ತು ತೆಗೆದುಕೊಳ್ಳಲಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಂದು ವಿಧಾನಸಭೆಯಲ್ಲಿ ವಿವರಿಸಿದರು. ಆರು ತಿಂಗಳ ನಂತರ ತಮಿಳುನಾಡು ವಿಧಾನಸಭೆ ಅಧಿವೇಶನ ಮಂಗಳವಾರ ಪ್ರಾರಂಭವಾಯಿತು. ವಿರೋಧ…
ಪ್ರಿಯಾಂಕ್ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿದೆ? ಅವರಿಗೆ ರಕ್ಷಣೆ ಒದಗಿಸಲಾಗುವುದು: ಸಿಎಂ ಸಿದ್ದರಾಮಯ್ಯ
ಮೈಸೂರು: “ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ?, ಬೆದರಿಕೆಗಳಿಗೆ ನಾವು ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಮಗೆ ಬೆದರಿಕೆ ಕರೆ ಬಂದಿರುವ ಕುರಿತು ಪ್ರಿಯಾಂಕ್ ಖರ್ಗೆ…
ಉಡುಪಿ: ಸಮುದ್ರಕ್ಕೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಬೈಂದೂರು: ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಹೊಸಹಿತ್ಲು ಮಕ್ಕಿತಾರು ನಿವಾಸಿಗಳಾದ ಉದಯ ದೇವಾಡಿಗ ಎಂಬುವವರ ಪುತ್ರ ಆಶಿಶ್ ದೇವಾಡಿಗ…
ಬಿಹಾರ ಚುನಾವಣೆ: ಜಾನಪದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರು ಸೋಮವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಸೇರಿದರು. ಪಾಟ್ನಾದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಮೈಥಿಲಿ ಠಾಕೂರ್ ಅವರು ಬಿಜೆಪಿ ಸೇರಿದರು. “ಪಕ್ಷ…
ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ: ಡಿ.ಕೆ.ಶಿವಕುಮಾರ್
ಹಾಸನ: ನನಗೆ ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಆ ಭಗವಂತನಿಗೆ ಮಾತ್ರ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.…
ಆಪರೇಷನ್ ಸಿಂದೂರ್ ವೇಳೆ ಪಾಕ್ನ 11 ವಾಯುನೆಲೆ, 6 ಫೈಟರ್ ಜೆಟ್ ನಾಶ ಮಾಡಿದ್ದೇವೆ: ಲೆ.ಜ.ರಾಜೀವ್ ಘಾಯ್
ನವದೆಹಲಿ: ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತಿಯಾಗಿ ನಡೆದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 11 ವಾಯುನೆಲೆಗಳನ್ನು ಭಾರತೀಯ ಸೇನೆ ನಾಶಪಡಿಸಿದೆ. ಈ ದಾಳಿಯನ್ನು ತಡೆಯುವಲ್ಲಿ ಪಾಕಿಸ್ತಾನ ದಯನೀಯ ವೈಫಲ್ಯ ಕಂಡಿತು ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ, ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು…
ರಾಜಸ್ಥಾನ | ಹೊತ್ತಿ ಉರಿದ ಬಸ್: ಸಜೀವ ದಹನಗೊಂಡ ಪ್ರಯಾಣಿಕರ ಸಂಖ್ಯೆ 20ಕ್ಕೆ ಏರಿಕೆ, ಪ್ರಧಾನಿ ಮೋದಿ ಪರಿಹಾರ ಘೋಷಣೆ
ಜೈಪುರ: ಜೈಪುರದ ಎಸ್ಎಂಎಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಎಂಟು ಜನರು ಮೃತಪಟ್ಟ ಕೇವಲ ವಾರದ ನಂತರ ಜೈಸಲ್ಮೇರ್ನಿಂದ ಜೋಧ್ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು ಜೀವಂತವಾಗಿ ಸುಟ್ಟುಹೋದ ಪ್ರಯಾಣಿಕರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 16 ಪ್ರಯಾಣಿಕರು ಗಂಭೀರವಾಗಿ…
ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಜನ್ ಸೂರಾಜ್ ಪಕ್ಷ ಬಲಪಡಿಸಲು ಕೆಲಸ ಮಾಡುವೆ: ಪ್ರಶಾಂತ್ ಕಿಶೋರ್
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ, ನಮ್ಮ ಪಕ್ಷವನ್ನು ಉತಮ್ಮ ಹಂತಕ್ಕೆ ಕೊಂಡೊಯ್ಯುವೆ ಎಂದು ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ. ಪಿಟಿಐ ಸಂದರ್ಶನದಲ್ಲಿ ಮಾತನಾಡಿರುವ ಅವರು, ಈ ಬಾರಿ ಚುನಾವಣೆಯಲ್ಲಿ ಜನ್ ಸೂರಾಜ್…
ರೈತ ಸಮೃದ್ದಿ ತೋಟಗಾರಿಕಾ ಉತ್ಪಾದಕರ ಕಂಪನಿಯ ವಾರ್ಷಿಕ ಮಹಾಸಭೆ
ನರೇಗಲ್ಲ: ಈ ನಾಡಿನ ಅನ್ನದಾತ ರೈತನ ಶ್ರಯೋಭಿವೃದ್ದಿಗಾಗಿ ರಚಿಸಿಕೊಳ್ಳಲು ಸರಕಾರ ರೈತ ಉತ್ಪಾದಕ ಎಫ್ಪಿಓ ಸಂಸ್ಥೆಯನ್ನು ತೆರೆಯಲು ಅನುಕೂಲತೆ ಕಲ್ಪಿಸಿದೆ ಎಂದು ರೋಣ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್. ಎಫ್. ತಹಸಿಲ್ದಾರ ಹೇಳಿದರು. ನರೇಗಲ್ಲ ಪಟ್ಟಣದ ರೋಟರಿ ಹಾಲ್ನಲ್ಲಿ ನಡೆದ…
