ಇಂದು ಜಗತ್​ಪ್ರಸಿದ್ದ ಮೈಸೂರು ದಸರಾ ಜಂಬೂ ಸವಾರಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ದಸರಾ ಗಜಪಡೆಯ ನಾಯಕ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುವ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾತರದಿಂದ ಕಾಯುತ್ತಿದ್ದಾರೆ. ಈ…

ಫಿಲಿಫೈನ್ಸ್​ನಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ!

ಫಿಲಿಪೈನ್ಸ್‌: ಮಧ್ಯ ಫಿಲಿಪೈನ್ಸ್‌ನಲ್ಲಿ ಮಂಗಳವಾರ ರಾತ್ರಿ 9:59 ಕ್ಕೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಇಂದು 69ಕ್ಕೆ ಏರಿದೆ. ಇನ್ನು ಹಲವರು ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 90,000 ಜನರಿರುವ ಬೊಗೊ ನಗರದ ಬಳಿ ಮಂಗಳವಾರ ರಾತ್ರಿ 9:59 ಕ್ಕೆ…

ಅಕ್ಟೋಬರ್ 3ರ ಭಾರತ್ ಬಂದ್ ಮುಂದೂಡಿದ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್

ನವದೆಹಲಿ: ಅಕ್ಟೋಬರ್ 3ರ ಭಾರತ್ ಬಂದ್ ಅನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಮುಂದೂಡಿದೆ. ಅಕ್ಟೋಬರ್ 3ರಂದು ನಡೆಯಬೇಕಿದ್ದ ಭಾರತ್ ಬಂದ್ ಮುಂದೂಡಲಾಗಿದೆ. ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸುವುದಾಗಿ ಹೇಳಿದೆ.…

ತಮಿಳುನಾಡಿನಲ್ಲಿ ಮತ್ತೊಂದು ದುರಂತ: ಉಕ್ಕಿನ ಕಮಾನು ಕುಸಿದು 9 ಕಾರ್ಮಿಕರು ಸಾವು

ಚೆನ್ನೈ: ಕರೂರು ಕಾಲ್ತುಳಿತದಲ್ಲಿ 41 ಜನ ಸಾವನ್ನಪ್ಪಿದ್ದ ಭೀಕರ ದುರಂತದ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಎನ್ನೋರ್ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ಸ್ಥಳದಲ್ಲಿ ಮಂಗಳವಾರ ಉಕ್ಕಿನ ಕಮಾನು ಕುಸಿದು ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾನೆ. ಸ್ಥಾವರದ 4…

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ. ಇನ್ನೂ…

ಹಾಸನದಲ್ಲಿ ನಿಗೂಢ ಸ್ಫೋಟ ಕೇಸ್‌: ಗಂಭೀರ ಗಾಯಗೊಂಡಿದ್ದ ದಂಪತಿ ಸಾವು

ಹಾಸನ: ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ…

ಯಾರ ಬಳಿ ಆಯುಧ ಇಲ್ಲವೋ ಅವರೆಲ್ಲಾ ಆಯುಧ ಖರೀದಿಸಿ ಪೂಜಿಸಿ: ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ

ಬಾಗಲಕೋಟೆ: ಶಕ್ತಿಶಾಲಿ ಸಮಾಜ ಕಟ್ಟಬೇಕಿದ್ದಲ್ಲಿ ಸಮಸ್ತ ಹಿಂದೂಗಳು ಆಯುಧ ಪೂಜೆ ಮಾಡಬೇಕು. ಯಾರ ಬಳಿ ಆಯುಧ ಇಲ್ಲವೋ ಅವರೆಲ್ಲಾ ಆಯುಧ ಖರೀದಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಕರೆ ನೀಡಿದ್ದಾರೆ. ನವಮಿ ಅಂದ್ರೆ ಬಹಳಷ್ಟು ಜನ ಮರೆತಿದ್ದು ಕೇವಲ…

ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ ಕಾಲ್ತುಳಿತದ ಹಿಂದಿನ ಸತ್ಯ ಶೀಘ್ರ ಬಹಿರಂಗಗೊಳ್ಳುತ್ತೆ

ಚೆನ್ನೈ: ಕರೂರು ಕಾಲ್ತುಳಿತ ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಮೂಲಕ ಸಂದೇಶವನ್ನು ಹಂಚಿಕೊಂಡಿರುವ ಅವರು, ನನ್ನ ಜೀವನದಲ್ಲೇ…

ರಾಜಕೀಯ ಶಕ್ತಿ ಪ್ರದರ್ಶಿಸಲು ವಿಜಯ್ ಅವರನ್ನು ತಡವಾಗಿ ಬರಲು ಹೇಳಲಾಗಿತ್ತೆ?: ಎಫ್‌ಐಆರ್‌ನಲ್ಲಿ ಏನಿದೆ?

ಕರೂರ್ : ದೊಡ್ಡ ಜನಸಮೂಹವನ್ನು ಒಟ್ಟುಗೂಡಿಸುವ ಮತ್ತು ರಾಜಕೀಯ ಶಕ್ತಿಯನ್ನು ಪ್ರದರ್ಶಿಸುವ ಉದ್ದೇಶದಿಂದ ಪಕ್ಷದ ಸಂಘಟಕರು ಉದ್ದೇಶಪೂರ್ವಕವಾಗಿ ವಿಜಯ್ ಅವರ ಆಗಮನವನ್ನು 4 ಗಂಟೆಗಳ ಕಾಲ ವಿಳಂಬಗೊಳಿಸಿದ್ದಾರೆ ಎಂದು ಕರೂರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಕರೂರಿನಲ್ಲಿ ನಡೆದ ಟಿವಿಕೆ…

ಬೆಂಗಳೂರು: ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಂಜು (27) ಹತ್ಯೆಯಾದವರು. ಧರ್ಮಶೀಲನ್ (29) ಆತ್ಮಹತ್ಯೆಗೆ ಶರಣಾದವ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ದೂರುದಾರ ಪೆರಿಯಸ್ವಾಮಿ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282