ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದೆರೆಡು ದಿನದಿಂದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 30ರ ವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಮುನ್ನೆಚ್ಚೆರಿಕಾ ಕ್ರಮವಾಗಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

“ಉಪವಾಸವು ಮನುಷ್ಯನಲ್ಲಿ ಮಾನವೀಯತೆಯ ಗುಣವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿಯನ್ನು ಧರ್ಮನಿಷ್ಠನನ್ನಾಗಿಸುತ್ತದೆ” ಎಂದು ಜ.ಇ.ಹಿಂದ್ ಕರ್ನಾಟಕ, ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ

ತುಮಕೂರು: “ಉಪವಾಸವು ಮನುಷ್ಯನಲ್ಲಿ ಮಾನವೀಯತೆಯ ಗುಣವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿಯನ್ನು ಧರ್ಮನಿಷ್ಠನನ್ನಾಗಿಸುತ್ತದೆ” ಎಂದು ಜ.ಇ.ಹಿಂದ್ ಕರ್ನಾಟಕ, ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಹೇಳಿದರು. ಅವರು ಜಮಾಅತೆ ಇಸ್ಲಾಮೀ ಹಿಂದ್ ತುಮಕೂರು ವತಿಯಿಂದ ಸ್ಥಳೀಯ ಸುಧಾ ಟೀಹೌಸ್ ಸಭಾಂಗಣದಲ್ಲಿ ಹಮ್ಮಿಕೊಂಡ…

‘ಇಂದು ಜಾತಿ-ಧರ್ಮ ಹಾಗೂ ಭಾಷೆಯ ಆಧಾರದಲ್ಲಿ ಜನರನ್ನು ವಿಂಗಡಿಸುತ್ತಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದ್ದು, ಧರ್ಮವನ್ನು ನಂಬುವವರು ಸಮಾನತೆಯ ಪ್ರತಿಪಾದಕರಾಗಬೇಕು”: ರಿಯಾಝ್ ಅಹ್ಮದ್ ರೋಣ

ಧಾರವಾಡ : ‘ಇಂದು ಜಾತಿ-ಧರ್ಮ ಹಾಗೂ ಭಾಷೆಯ ಆಧಾರದಲ್ಲಿ ಜನರನ್ನು ವಿಂಗಡಿಸುತ್ತಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದ್ದು, ಧರ್ಮವನ್ನು ನಂಬುವವರು ಸಮಾನತೆಯ ಪ್ರತಿಪಾದಕರಾಗಬೇಕು” ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ರಾಜ್ಯ ಸಹ ಕಾರ್ಯದರ್ಶಿ ಹೇಳಿದರು. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಮಾಅತೆ…

ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ವಕ್ಷೇತ್ರ ಸೊರಬ ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತಮ್ಮ ಜೊತೆ ವಿದ್ಯಾರ್ಥಿಗಳನ್ನು ಅವರು ಕರೆದುಕೊಂಡು…

ಗಂಡನ ಚಿಕಿತ್ಸೆಗಾಗಿ ಮಾಲೀಕರ ಮನೆಯಲ್ಲಿ 12 ಕೆಜೆ ಬೆಳ್ಳಿ ಸಾಮಗ್ರಿ ಕದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯೊಬ್ಬಳನ್ನ ಜೀವನ್ ಬಿಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಚೈತ್ರಾ ಬಂಧಿತ ಆರೋಪಿ. ಕಳೆದ ಒಂದು ವರ್ಷದಿಂದ ಹಂತಹಂತವಾಗಿ ಕಳ್ಳತನ‌ ಮಾಡಿದ್ದ ಮಹಿಳೆಯಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ…

‘ದಿ ಕೇರಳ ಸ್ಟೋರಿ’ | ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತಿದೆ: ಹೈಕೋರ್ಟ್

ಕೊಚ್ಚಿ: ‘ದಿ ಕೇರಳ ಸ್ಟೋರಿ – ಗೋಸ್ ಬಿಯಾಂಡ್’ ಚಿತ್ರವು ಕೇರಳದಂತದ ಜಾತ್ಯತೀತ ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೇರಳದಲ್ಲಿ ಜನರು ಕೋಮು ಸೌಹಾರ್ದದಲ್ಲಿ ಬದುಕುತ್ತಾರೆ. ಹಾಗಿರುವಾಗ ಕೇರಳದ ಹೆಸರನ್ನು ಬಳಕೆ ಮಾಡುವುದು ಮತ್ತು ಚಿತ್ರವು…

ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ

ಬೆಂಗಳೂರು: ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರೇ ಯುವ…

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ – ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಗೃಹಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು…

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ: ಬರೋಬ್ಬರಿ 7 ಕೋಟಿ ವರ್ಗಾವಣೆ

ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ…

ಕೇರಳದಲ್ಲಿ ‘ಲೈಫ್‌ ಮಿಷನ್’ ಸಾಧನೆ: 5 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿದ ಪಿಣರಾಯಿ ಸರ್ಕಾರ

ತಿರುವನಂತಪುರಂ: ಕೇರಳವನ್ನು ವಸತಿ ರಹಿತ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿಯೊಂದಿಗೆ ಆರಂಭಿಸಲಾದ ಎಲ್‌ಡಿಎಫ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಲೈಫ್ ಮಿಷನ್’ ಯೋಜನೆಯಡಿ ಐದು ಲಕ್ಷ ಮನೆಗಳ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಘೋಷಿಸಿದ್ದಾರೆ. 2016ರಲ್ಲಿ ಅಧಿಕಾರಕ್ಕೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282