ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Share