ಪ್ರೇಮಿಗಳ ಆತ್ಮಹತ್ಯೆಗೆ ಪ್ರಯತ್ನ ಚಿಕಿತ್ಸೆ ಫಲಿಸದೇ ಯುವತಿ ಸಾವು ಯುವಕನ ಸ್ಥಿತಿ ಚಿಂತಾಜಾನಕ

Share
0Shares

ಗದಗ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದಲ್ಲಿ ನಡೆದಿದೆ.

ದೇವಪ್ಪ ಅಲಿಯಾಸ್‌ ಮುತ್ತು ಹಾಗೂ 17 ವರ್ಷದ ಸ್ಥಳಿಯ ಬಾಲಕಿ ಇಬ್ಬರು ವಿಷ ಸೇವನೆ ಮಾಡಿದ್ದಾರೆ ಚಿಕಿತ್ಸೆ ಫಲಿಸದೆ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದು, ಇನ್ನು ದೇವಪ್ಪ ಅಲಿಯಾಸ್‌ ಮುತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪ್ರಾಪ್ತರಾದ ಪ್ರೇಮಿಗಳಿಬ್ಬರು ಕಾಲೇಜ್ ನಿಂದ ಬಂದು ಜಮೀನಿನಲ್ಲಿ ಒಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಳೆದ ಮೂರು ದಿನಗಳ ಹಿಂದೆ ಜುಲೈ 7 ರಂದು ನಡೆದಿದೆ ಜಿಮ್ಸ ಆಸ್ಪತ್ರೆಯಲ್ಲಿ ದಾಖಲಾದ ಇಬ್ಬರ ಪೈಕಿ ಯುವತಿ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಳಾಗಿದ್ದಾಳೆ.

ಇನ್ನು ದೇವಪ್ಪ ಅಲಿಯಾಸ್ ಮುತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282