ಹಾವೇರಿ: “ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ” ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಚಿವ ಸ್ಥಾನ ಕಳೆದುಕೊಂಡವರಿಗೆ ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನ ನೀಡಲಾಗುತ್ತದೆ. ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಅಂತಿಮವಾಗಿ ಹೈಕಮಾಂಡ್ ಮತ್ತು ಸಿಎಂ ನಿರ್ಧರಿಸುತ್ತಾರೆ” ಎಂದು ಹೇಳಿದರು.
“ಕೆಲ ಸಚಿವರು ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಕೇಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡದಂತೆ ತಿಳಿಸಿದ್ದಾರೆ. ಈ ವಿಷಯದ ಕುರಿತಂತೆ ನಾವು ಏನೂ ಮಾತನಾಡುವುದಿಲ್ಲ” ಎಂದರು.
Share