ಮುಂಬೈ: ಬೋಯಿಂಗ್ 787 ಮತ್ತು 737 ವಿಮಾನಗಳಲ್ಲಿನ ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಳ್ಳುವುದಕ್ಕೂ ಮುನ್ನ ಅದರ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಸುವ ಸ್ವಿಚ್‌ಗಳು ‘ಕಟ್ ಆಫ್ ಸ್ಥಿತಿಯಲ್ಲಿ ಇದ್ದವು’ ಮತ್ತು ಇದರಿಂದ ಪೈಲಟ್‌ಗಳು ಗೊಂದಲಕ್ಕೀಡಾಗಿದ್ದರು ಎಂಬ ವಿಷಯ ವಿಮಾನ ಅಪಘಾತ ತನಿಖಾ ಬ್ಯೂರೊ (ಎಎಐಬಿ) ತನಿಖೆಯಿಂದ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದೆ.
ಭಾರತೀಯ ವಿಮಾನಯಾನ ಸಂಸ್ಥೆಗಳು 150 ಕ್ಕೂ ಹೆಚ್ಚು ಬೋಯಿಂಗ್ 737 ಮತ್ತು 787 ವಿಮಾನಗಳನ್ನು ನಿರ್ವಹಿಸುತ್ತಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್, ಸ್ಪೈಸ್‌ಜೆಟ್ ಮತ್ತು ಇಂಡಿಗೊ ಈ ವಿಮಾನಗಳನ್ನು ನಿರ್ವಹಿಸುವ ದೇಶೀಯ ಸಂಸ್ಥೆಗಳಾಗಿವೆ.
Share