ಧರ್ಮಸ್ಥಳ ಪ್ರಕರಣ: ಬೆಳ್ಳಂಬೆಳಗ್ಗೆ ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್

Share
0Shares

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ.

ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ ಸುಜಾತಾ ಭಟ್ ಇಂದು ಪೊಲೀಸರು ಆಗಮಿಸುವ ಮುನ್ನವೇ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಕೀಲರ ಜೊತೆ ಆಗಮಿಸಿದ ಸುಜಾತಾ ಭಟ್ ವಿಚಾರಣೆ ಎದುರಿಸಲು ಸಜ್ಜಾಗಿದ್ದಾರೆ.

ಎಸ್ಐಟಿ ತನಿಖಾಧಿಕಾರಿಗಳು ಪ್ರತಿ ದಿನ ವಿಚಾರಣೆ ನಡೆಸುತ್ತಿದ್ದಾರೆ. ತಡ ರಾತ್ರಿವರೆಗೂ ವಿಚಾರಣೆಯ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ. ಪೊಲೀಸರು, ತನಿಖಾಧಿಕಾರಿಗಳು ಬೆಳಗಿನ ಜಾವ ಕಣ್ಣು ಬಿಡುವ ಮೊದಲೇ ಸುಜಾತಾ ಭಟ್ ಎಸ್ಐಟಿ ಕಚೇರಿ ಮುಂದೆ ಹಾಜರಾಗಿದ್ದಾರೆ.

ಸಾಮಾನ್ಯವಾಗಿ 9 ರಿಂದ 10 ಗಂಟೆಗೆ ಎಸ್ಐಟಿ ಅಧಿಕಾರಿಗಳು, ಪೊಲೀಸರು ಕಚೇರಿಗೆ ಆಗಮಿಸುತ್ತಿದ್ದರು. ಆದರೆ ಸುಜಾತಾ ಭಟ್ ಬೆಳಗ್ಗೆ 5 ಗಂಟೆಗೆ ಕಚೇರಿಗೆ ಹಾಜರಾಗಿದ್ದಾರೆ. ಸುಜಾತಾ ಭಟ್ ವಯಸ್ಸು ಹಾಗೂ ಆರೋಗ್ಯದ ಕಾರಣದಿಂದ ಎಸ್ಐಟಿ ಅಧಿಕಾರಿಗಳು ಬಹುಬೇಗನೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ದಯಾಮ ಸೇರಿದಂತೆ ತಂಡ ಬೆಳ್ತಂಗಡಿ ಕಚೇರಿಗೆ ಆಗಮಿಸಿದ್ದಾರೆ. ದಯಾಮಾ ಜೊತೆ ಎಸ್ಪಿ ಸೈಮನ್ ಸೇರಿ ಇತರ ಅಧಿಕಾರಿಗಳು ಆಗಮಿಸಿದ್ದಾರೆ. ಇದರ ಜೊತೆಗೆ ಭದ್ರತೆಗಾಗಿ ಇತರ ಪೊಲೀಸರು ಆಗಮಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282