ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ: ಬಿಜೆಪಿ, ಹಿಂದುತ್ವ ಕಾರ್ಯಕರ್ತರು ವಶಕ್ಕೆ Posted by

Share
0Shares

ಮೈಸೂರು: ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆಪಿ ಮತ್ತು ಹಿಂದುತ್ವ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಂದೂ ಜಾಗರಣಾ ವೇದಿಕೆ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ ಪಾದಯಾತ್ರೆ ನಡೆಸಲು ದಲಿತ ಸಂಘಟನೆಗಳು ಕರೆ ನೀಡಿದ್ದವು. ಈ ಎರಡೂ ಪಾದಯಾತ್ರೆಗಳಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ.

ಅನುಮತಿ ಇಲ್ಲದೇ ಇದ್ದರೂ ಹಿಂದೂ ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಪಾದಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿತ್ತು. ಹೀಗಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಬೆಳಗ್ಗೆ ಪಾದಯಾತ್ರೆ ನಡೆಸಲು ಆಗಮಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದರು. ಕುರುಬರಹಳ್ಳಿ ಸರ್ಕಲ್ ಬಳಿ ಹೈ ಡ್ರಾಮಾ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಕೊನೆಗೆ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಸೇರಿದಂತೆ ಹಲವು ಮುಖಂಡರು, ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282