ಭವಿಷ್ಯದ ಪೀಳಿಗೆಗಾಗಿ ಸಮೀಕ್ಷೆ; ಎಲ್ಲಾ ಜಾತಿಯವರೂ ಸಹಕರಿಸಿ: ಡಿ.ಕೆ. ಶಿವಕುಮಾರ್ ಮನವಿ

Share
0Shares

ಬೆಂಗಳೂರು: ‘ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸುವ ಸಲುವಾಗಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ ಮನವಿ ಮಾಡಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಸಮೀಕ್ಷೆಗೆ ಶನಿವಾರ ಚಾಲನೆ ನೀಡಿದ ನಂತರ, ಸದಾಶಿವನಗರ ನಿವಾಸದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

‘ಜಿಬಿಎ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದ್ದು, ನನ್ನ ಮನೆಯಲ್ಲೂ ಸಮೀಕ್ಷೆ ನಡೆಸಿದ್ದಾರೆ. ನಾನು ಎಲ್ಲಾ ಮಾಹಿತಿ ನೀಡಿದ್ದೇನೆ. ಸಾರ್ವಜನಿಕರು ಕೂಡ ತಾಳ್ಮೆಯಿಂದ ಮಾಹಿತಿ ಒದಗಿಸಬೇಕು. ಎಲ್ಲಾ ಜಾತಿ ಸಮುದಾಯದವರು ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.

ಹೆಚ್ಚು ಪ್ರಶ್ನೆಗಳಿದ್ದು ಸರಳೀಕರಣ ಮಾಡಬೇಕಿತ್ತು ಎಂಬ ಪ್ರಶ್ನೆಗೆ, ‘ನಾನು ಕೂಡ ಇಂದೇ ಈ ಪ್ರಶ್ನೆಗಳನ್ನು ನೋಡಿದೆ. ಇವುಗಳನ್ನು ಸರಳೀಕರಣ ಮಾಡಬೇಕಿತ್ತು. ನಗರ ಪ್ರದೇಶದಲ್ಲಿ ಜನರಿಗೆ ತಾಳ್ಮೆ ಕಡಿಮೆ’ ಎಂದಿದ್ದಾರೆ.

ವೈಯಕ್ತಿಕ ಮಾಹಿತಿ ಕುರಿತ ಕೆಲವು ಪ್ರಶ್ನೆಗಳಿವೆ ಎಂಬುದಕ್ಕೆ, ‘ಅಂತಹ ಪ್ರಶ್ನೆಗಳಿಗೆ ಉತ್ತರ ನೀಡಲು ಬಲವಂತ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸಮೀಕ್ಷೆದಾರರು ಪ್ರಶ್ನೆಗಳನ್ನು ಕೇಳುತ್ತಾರೆ. ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಬೆಂಗಳೂರು ನಗರದಲ್ಲಿ ಸಮೀಕ್ಷೆ ನಡೆಸುವಾಗ ಸೂಕ್ಷ್ಮವಾಗಿರಬೇಕು ಎಂದು ಸಮೀಕ್ಷೆದಾರರಿಗೂ ಹೇಳಿದ್ದೇನೆ’ ಎಂದು ತಿಳಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282