ಮೈಸೂರು: ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ.
ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಆದ್ರೆ, ನಿನ್ನೆ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೇಟಗಳ್ಳಿ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದರೆ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ತಕ್ಷಣವೇ ಆರೋಪಿಯನ್ನು ಬಂಧಿಸಿದ ಪೊಲೀಸರು, ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
