RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Share
0Shares

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಂಭಾವ್ಯ ಸಂಪುಟ ಪುನರ್ರಚನೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅಂತಹ ವಿಷಯಗಳಲ್ಲಿ ಪಕ್ಷದ ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ನಿರ್ಧಾರವು ನಿರ್ಣಾಯಕವಾಗಿದೆ. ಸಚಿವ ಸಂಪುಟ ಪುನರ್ರಚನೆಗೂ (ಸೋಮವಾರ ಸಚಿವರೊಂದಿಗೆ) ಔತಣಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್‌ನಲ್ಲಿ ಯಾವುದೇ ಕ್ರಾಂತಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282