ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು

Share
0Shares

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಗುರುವಾರ ಸಂಜೆ ಕಂಟೇನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಡಿಕ್ಕಿಯ ನಂತರ ಕೆಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ವರದಿಗಳು ತಿಳಿಸಿವೆ.

ಪುಣೆ ನಗರದ ಹೊರವಲಯದಲ್ಲಿರುವ ಮುಂಬೈ-ಬೆಂಗಳೂರು ಹೆದ್ದಾರಿಯ ಸೇತುವೆಯ ಮೇಲೆ ಬೆಂಕಿ ಹೊತ್ತಿಕೊಂಡಿದ್ದು, ಎರಡು ದೊಡ್ಡ ಕಂಟೇನರ್ ಟ್ರಕ್‌ಗಳ ನಡುವೆ ಕಾರೊಂದು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇಂದು ಸಂಜೆ ನವಲೆ ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಎಂಟರಿಂದ ಹತ್ತು ಜನ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

“ಅಪಘಾತ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಪ್ರಸ್ತುತ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ತಕ್ಷಣ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆಯಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282