ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಿಸಲು ಕೇರಳ ಆದೇಶ

Share
0Shares

ಮಂಗಳೂರು: ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಸದಸ್ಯ ಎ.ಆರ್.ಸುಬ್ಬಯ್ಯ ಕಟ್ಟೆ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಿದ್ದರು.

ಕಾಸರಗೋಡಿನಲ್ಲಿ ಎಲ್ಲ ಗುರುತಿನ ಚೀಟಿಗಳು ಮಲಯಾಳಂ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿದ್ದು, ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಪರಿಗಣಿಸಿ, ರೇಶನ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆ ಅಳವಡಿಸುವಂತೆ ಕೋರಲಾಗಿತ್ತು.

ಅದರಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಾರ್ಯದರ್ಶಿ ಅವರು ತಮ್ಮ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282