ಯಾರೋ ಒಬ್ಬರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ: ಹಲವರ ಪರಿಶ್ರಮವಿದೆ; ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್

Share
0Shares

ಬೆಳಗಾವಿ : ರಾಜ್ಯ ಕಾಂಗ್ರೆಸ್‌ನಲ್ಲಿ ಎದುರಾಗಿರುವ ಸಿಎಂ ಕುರ್ಚಿ ವಿಚಾರದಲ್ಲಿ ಹೇಳಿಕೆಗಳು ಮುಂದುವರಿದಿದ್ದಾರೆ. ಪ್ರಮುಖ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದು, ರಾಜ್ಯದಲ್ಲಿ ಸರಕಾರ ಒಬ್ಬರ ಶ್ರಮದಿಂದಲೇ ಅಧಿಕಾರಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು ನಾನೂ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂಬ ಪರಮೇಶ್ವರ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಪರಮೇಶ್ವರ್‌ ಅವರು 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದವರು. ಅವರು ಬಹಳಷ್ಟು ಕಾರ್ಯಕ್ರಮ‌ ಮಾಡಿದ್ದರಿಂದ ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂತು. ಹೀಗಾಗಿ, ಅವರು ಸಿಎಂ ಹುದ್ದೆ ಅಪೇಕ್ಷಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ಸಿಎಂ ರೇಸ್‌ನಲ್ಲಿ ತಾವು ಇದ್ದಿರಾ ಎಂಬ ಪ್ರಶ್ನೆಗೆ, ಅದನ್ನು ಕೇಳಲು ಹೋಗಬೇಡಿ. ಹೇಳುವ ಅವಶ್ಯಕತೆಯೂ‌ ಈಗಿಲ್ಲ ಎಂದರು.

ಇದೇ ವೇಳೆ, ಡಿಕೆಶಿಗೆ ಟಾಂಗ್‌ ನೀಡಿದ ಜಾರಕಿಹೊಳಿ, ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ದುಡಿದಿದ್ದಾರೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282