SDPI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಬೂತ್ ಲೆವೆಲ್ ಏಜೆಂಟ್ ಬಿಎಲ್ಎ ಗಳ‌ ಸಮ್ಮಿಲನ ಕಾರ್ಯಕ್ರಮ

Share
0Shares

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆಯ (SIR) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ ಗಳ ಸಮ್ಮಿಲನ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಧ್ಯಕ್ಷರಾದ ಇಕ್ಬಾಲ್ ಕಣ್ಣೂರು ರವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಎಸ್.ಡಿ.ಪಿ.ಐ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಬಶೀರ್ ಬಜಾಲ್ ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ SDPI ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಅವರು ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆ (SIR) ಕುರಿತು ಸವಿಸ್ತಾರ ಮಾಹಿತಿ ನೀಡಿ, ಬೂತ್ ಲೆವೆಲ್ ಏಜೆಂಟ್‌ಗಳ ಜವಾಬ್ದಾರಿ, ಮನೆಮನೆಗೆ ಭೇಟಿ, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಳಿಕೆ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಕೋಶಾಧಿಕಾರಿ ಯಾಸಿನ್ ಅರ್ಕುಳ ಉಪಸ್ಥಿತರಿದ್ದು SIR ಸಾಧಕ ಬಾಧಕದ ಕುರಿತು ಸಮಾರೋಪ ಭಾಷಣ ಮಾಡಿದರು.
ಈ ಕಾರ್ಯಕ್ರಮದ ಮೂಲಕ ಬೂತ್ ಲೆವೆಲ್ ಏಜೆಂಟ್‌ಗಳು SIR ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಾದ ಮಾರ್ಗದರ್ಶನವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಮಿಲಾಯತ್ ರವರು ಸ್ವಾಗತಿಸಿ, ಧನ್ಯವಾದಗೈದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282