ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದರು.
ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಅಸ್ಸಾಂ ಚುನಾವಣೆ ವಿಚಾರದ ಬಗ್ಗೆ ಇಂದು ಸಂಜೆ ಚರ್ಚೆ ನಡೆಸಲು ಎಐಸಿಸಿಯವರು ನನ್ನನ್ನು ಕರೆದಿದ್ದಾರೆ. ಕೇರಳಕ್ಕೆ ಹೋಗಿದ್ದೆ ಈಗ ಮುಗಿಸಿಕೊಂಡು ಅಸ್ಸಾಂಗೆ ಹೋಗಬೇಕು ಎಂದರು.
Share