ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಜಯಭೇರಿ; ಪ್ರಧಾನಿ ಹುದ್ದೆಗೇರಲು ಖಲೀದಾ ಜಿಯಾ ಮಗ ತಾರಿಕ್ ರೆಹಮಾನ್ ಸಿದ್ಧತೆ

Share
0Shares

ಢಾಕಾ(ಬಾಂಗ್ಲಾದೇಶ): ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಇದರೊಂದಿಗೆ ಮಾಜಿ ಪ್ರಧಾನಿ, ಇತ್ತೀಚಿಗೆ ನಿಧನ ಹೊಂದಿದ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಹೊಸ ಪ್ರಧಾನಿಯಾಗುವುದು ನಿಚ್ಚಳವಾಗಿದೆ.

2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಮಧ್ಯಂತರ ಸರ್ಕಾರದ ಬದಲು ಜನರಿಂದ ನೇರವಾಗಿ ಆಯ್ಕೆಯಾದ ಸರ್ಕಾರದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಪ್ರಧಾನಿ ಮೋದಿ ಅಭಿನಂದನೆ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282