ಅಂಡಮಾನ್: ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹಾರಾಟ ನಡೆಸಿದ್ದ ಹೆಲಿಕಾಪ್ಟರ್ವೊಂದು ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಪೈಲಟ್ ಸೇರಿದಂತೆ ಎಲ್ಲ ಏಳು ಮಂದಿಯನ್ನು ರಕ್ಷಿಸಲಾಗಿದೆ.
ಇಂದು ಬೆಳಿಗ್ಗೆ 9.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್ ನಿಗದಿಯಂತೆ ಮಾಯಾಬಂದರ್ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಇದಕ್ಕೂ ಮುನ್ನ ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್ನಲ್ಲಿ ಐವರು ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
