SIR ಪ್ರಕ್ರಿಯೆ ಸ್ಥಗಿತಗೊಳಿಸಲೆಂದು ನೆಪಗಳನ್ನು ಹೇಳುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್ ತಾಕೀತು

Share
0Shares

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ದೈನಂದಿನ ಆಕ್ಷೇಪಣೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅರ್ಜಿದಾರರು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ನೆಪಗಳನ್ನು ಹುಡುಕುವುದನ್ನು ನಿಲ್ಲಿಸಬೇಕು ಮತ್ತು ಅದಕ್ಕೊಂದು ಅಂತ್ಯ ಇರಬೇಕು ಎಂದು ಒತ್ತಿ ಹೇಳಿದೆ.

ಭಾರತೀಯ ಚುನಾವಣಾ ಆಯೋಗ ಎಸ್​​ಐಆರ್ ಪ್ರಕ್ರಿಯೆಯಲ್ಲಿ ಹಕ್ಕು ಪರಿಶೀಲನೆಗಾಗಿ ನಿಯೋಜಿಸಲಾದ ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ನೀಡುತ್ತಿರುವುದಕ್ಕೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಎತ್ತಿದ ಆಕ್ಷೇಪಣೆಗಳನ್ನು ಸ್ವೀಕರಿಸಲು ನಿರಾಕರಿದ ಸುಪ್ರೀಂ ಕೋರ್ಟ್, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಚುನಾವಣಾ ಸಮಿತಿಯ ತರಬೇತಿ ಮಾಡ್ಯೂಲ್ ತನ್ನ ಆದೇಶಗಳನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗ ಅಧಿಕಾರಿಗಳನ್ನು ನಂಬಬೇಕು ಎಂದು ಸ್ಪಷ್ಟಪಡಿಸಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಕಲ್ಯಾಣ್ ಬ್ಯಾನರ್ಜಿ ಅರ್ಜಿದಾರರನ್ನು ಪ್ರತಿನಿಧಿಸಿದರು ಮತ್ತು ಹಿರಿಯ ವಕೀಲ ಡಿ.ಎಸ್. ನಾಯ್ಡು ಅವರು ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದರು. ಅರ್ಜಿದಾರರ ವಕೀಲರು ಸಿಜೆಐ ನೇತೃತ್ವದ ಪೀಠದ ಮುಂದೆ ಮೌಖಿಕವಾಗಿ ಈ ವಿಷಯವನ್ನು ಪ್ರಸ್ತಾಪಿಸಿದರು.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282