T20 world cup 2026: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಚಾಂಪಿಯನ್ಸ್

Share
0Shares

ಅಹ್ಮದಾಬಾದ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್ ಟಾರ್ಗೆಟ್ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು.

ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು.

ಅಂತಿಮವಾಗಿ ಭಾರತದ ಎದುರು ನ್ಯೂಜಿಲ್ಯಾಂಡ್ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 159 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282