ಅಬುಧಾಬಿ: ರಾಷ್ಟ್ರೀಯ ವಾಯು ರಕ್ಷಣಾ ಪಡೆಗಳು ಪ್ರಸ್ತುತ ಇರಾನ್‌ನಿಂದ ಒಳಬರುವ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ.
ಗಲ್ಫ್ ರಾಷ್ಟ್ರವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ವೈಮಾನಿಕ ದಾಳಿಗಳಿಗೆ ಮಿಲಿಟರಿ ಪ್ರತಿಕ್ರಿಯೆ ನೀಡಿದೆ. ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸುತ್ತಿರುವ ಪರಿಣಾಮ ದೇಶದಾದ್ಯಂತ ಜೋರು ಸ್ಫೋಟದ ಶಬ್ದ ಕೇಳಿಬರುತ್ತಿದೆ ಎಂದೂ ವರದಿ ತಿಳಿಸಿದೆ.
ಯುಎಎಇಯಾದ್ಯಂತ ಸಾರ್ವಜನಿಕರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದ್ದು, ಕ್ಷಿಪಣಿ ಮತ್ತು ಡ್ರೋನ್‌ಗಳು ನಿಗದಿತ ಗುರಿ ತಲುಪುವ ಮೊದಲೇ ಹೊಡೆದುರುಳಿಸಲಾಗುತ್ತಿದೆ ಎಂದು ಹೇಳಿದೆ.
Share