ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.
ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ ಗೃಹಬಳಕೆಯ ಎಲ್‌ಪಿಜಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ.
ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆಯಂತಹ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದಾಗಿವೆ. ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 130 ಡಾಲರ್‌ಗಳನ್ನು ತಲುಪದ ಹೊರತು ಮತ್ತು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
Share