ಬೆಂಗಳೂರು: ರಾಜ್ಯದಲ್ಲಿ ಕಳೆದೆರೆಡು ದಿನದಿಂದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಾರ್ಚ್ 30ರ ವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಮುನ್ನೆಚ್ಚೆರಿಕಾ ಕ್ರಮವಾಗಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಪೈಕಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿದೆ.
ಉತ್ತರ ಕರ್ನಾಟಕ, ಮಲೆನಾಡು ಹಾಗೂ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವ ಇದೆ ಎಂದಿದೆ. ಮಲೆನಾಡು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಈ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ತೀವ್ರಗೊಳ್ಳಲಿದೆ ಎಂದಿದೆ. ಮಳೆಯ ಜೊತೆ ಬಿರುಗಾಳಿ ಬೀಸುವ ಸಾಧ್ಯತೆ ಇಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದೆ. ಸಂಜೆ ನಂತರ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಹೆಚ್ಚು ಎಂದು ಸಾರ್ವಜನಿಕರಿಗೆ ಹವಮಾನ ಇಲಾಖೆ ಸೂಚನೆ ನೀಡಿದೆ. ಇದೇ ವೇಳೆ ಕೆಲ ಸೂಚನೆಗಳನ್ನು ಪಾಲಿಸಲು ಹವಾಮಾನ ಇಲಾಖೆ ಸೂಚಿಸಿದೆ. ಗುಡುಗು ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬೇಡಿ. ವಾಹನ ಚಾಲನೆ ವೇಳೆ ಎಚ್ಚರಿಕೆ ಅಗತ್ಯ ಎಂದಿದೆ.
Share