ಎಲ್‍ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

Share
0Shares

ಗದಗ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ರೋಣ, ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ಲಾರಿ ಹೊರಟಿತ್ತು. ತಿರುವಿನಲ್ಲಿ ಓವರಟೇಕ್ ಮಾಡಲು ಹೋದ ವೇಳೆ ಲಾರಿ ಗುಂಡಿಗೆ ಇಳಿದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಲಾರಿ ಉರುಳಿದೆ. ಸಿಲಿಂಡರ್ ಚಲ್ಲಾಪಿಲ್ಲಿ ಆಗಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಸಿಲಿಂಡರ್ ಸ್ಫೋಟಿಸಿಲ್ಲ.

ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್‍ಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282