ಬೆಂಗಳೂರು: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ,ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.
ರಾಜ್ಯಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳನ್ನು ಇಂದು (ಜೂನ್ 09) ಚುನಾವಣಾಧಿ ಕಾರಿ ಕೆ.ಎಂ.ವಿಶಾಲಾಕ್ಷಿ ಅವರು ಪರಿಶೀಲನೆ ನಡೆಸಿದ್ದು, ನಾಲ್ವರ ನಾಪತ್ರಗಳು ಕ್ರಮಬದ್ಧವಾಗಿವೆ. ಆದ್ರೆ, ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದ ಭೋಜಣ್ಣ ಸೋಮಣ್ಣ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಚುನಾವಣೆ ಇಲ್ಲದೇ ನಾಲ್ವರು ಅವಿರೋಧ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ನಾಲ್ಕು ಸ್ಥಾನ ಹಾಗೂ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ರಾಜ್ಯಸಭೆ ಚುನಾವಣೆಗೆ ನಾಲ್ಕು ಮಂದಿ ಹಾಗೂ ಪರಿಷತ್ ಚುನಾವಣೆಗೆ 8 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು (ಜೂನ್ 09) ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯ ಸ್ಪರ್ಧಿಸಿದ್ದ ಭೋಜಣ್ಣ ಸೋಮಣ್ಣ ಅವರ ನಾಮಪತ್ರ ತಿರಸ್ಕೃತವಾಗಿದೆ. ಯಾವುದೇ ಅನುಮೋದಕರ ಸಹಿ ಇಲ್ಲದ ಕಾರಣ ಪಕ್ಷೇತರ ಅಭ್ಯರ್ಥಿ ಭೋಜಣ್ಣ ಸೋಮಣ್ಣ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಅವರು ತಿರಸ್ಕೃತ ಮಾಡಿದ್ದಾರೆ.
Share