ಬೆಂಗಳೂರು: “ಆದಷ್ಟು ಶೀಘ್ರವಾಗಿ ಸಂಪುಟ ವಿಸ್ತರಣೆ ಆಗಲಿದೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.
ಸೋಮವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ಆದಷ್ಟು ಶೀಘ್ರವಾಗಿ ಸಂಪುಟ ವಿಸ್ತರಣೆ ಆಗಲಿದೆ. ರಾಹುಲ್ ಗಾಂಧಿ ಅವರು ದೆಹಲಿಗೆ ಬಂದಿದ್ದಾರೆ. ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದರು.
ಇತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆಕಾಂಕ್ಷಿಗಳು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಸಚಿವಾಕಾಂಕ್ಷಿ ಶಾಸಕ ಅಶೋಕ್ ಪಟ್ಟಣ್, ಶಾಸಕರಾದ ರಾಜೇಗೌಡ, ಶಿವಲಿಂಗೇ ಗೌಡರು ಆಗಮಿಸಿ ಲಾಬಿ ನಡೆಸಿದರು.
