ರಾಮ ಮಂದಿರಕ್ಕೆ ಪ್ರಥಮ CEO ನೇಮಕಕ್ಕೆ ಅರ್ಜಿ ಆಹ್ವಾನ: ಜುಲೈ 18 ಕೊನೆ ದಿನ

Share
0Shares

ಅಯೋಧ್ಯೆ: ರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆಯನ್ನು ಕಳ್ಳತನ ಮಾಡಿದ ಆರೋಪದ ಪ್ರಕರಣ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್​ಐಟಿ) ಈ ಕುರಿತು ತನಿಖೆ ತೀವ್ರಗೊಳಿಸಿದೆ. ಇದರ ನಡುವೆ, ರಾಮ ಮಂದಿರಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ನೇಮಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಂದಿರದ ಮೊದಲ ಸಿಇಒ ಹುದ್ದೆಗೆ ಸೋಮವಾರ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18ರಂದು ಅಂತಿಮ ದಿನ ನಿಗದಿಪಡಿಸಲಾಗಿದೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಟ್ರಸ್ಟ್, ನಿಗದಿತ ಕೊನೆ ದಿನಾಂಕದ ಸಂಜೆ 4 ಗಂಟೆಯವರೆಗೂ ಅಭ್ಯರ್ಥಿಗಳು ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದೆ. ದೇವಾಲಯದ ಕಾಣಿಕೆ ಹಣ ಮತ್ತು ಇತರ ಬೆಲೆ ಬಾಳುವ ವಸ್ತುಗಳ ದುರುಪಯೋಗದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

ಸಿಇಒ ಭಕ್ತರ ನಂಬಿಕೆ ಕಾಪಾಡಲಿ: ಈ ಕುರಿತಂತೆ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿರುವ ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, “ಮಂದಿರದ ಪ್ರಥಮ ಸಿಒಇ ಆಗಲಿರುವವರು ಅವರ ಅಧಿಕಾರ ಮತ್ತು ಕರ್ತವ್ಯಗಳನ್ನು ವ್ಯಾಖ್ಯಾನಿಸುವ ಸಂಪೂರ್ಣ ಹಕ್ಕು ಕೇವಲ ಟ್ರಸ್ಟ್​ಗೆ ಮಾತ್ರ ಇರುತ್ತದೆ. ಟ್ರಸ್ಟ್​ ಮೇಲೆ ಭಕ್ತರು ಇಟ್ಟಿರುವ ನಂಬಿಕೆಯನ್ನು ಕಾಪಾಡುವುದರ ಜೊತೆಗೆ ದೇವಾಲಯ ಆಡಳಿತವನ್ನು ಪಾರದರ್ಶಕವಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಅವರ ಮೇಲಿರುತ್ತದೆ” ಎಂದು ಹೇಳಿದ್ದಾರೆ.

Share
0Shares

Leave a Reply

Your email address will not be published. Required fields are marked *

WP2Social Auto Publish Powered By : XYZScripts.com